ಪರಿಶಿಷ್ಟ ಪಂಗಡದ ಕಾನೂನು ಪದವಿಧರರಿಗೆ ಸುವರ್ಣ ಅವಕಾಶ, ತ್ವರಿತವಾಗಿ ಅರ್ಜಿ ಸಲ್ಲಿಸಿ.…ಏನಿದು ಅವಕಾಶ?
ಸರಕಾರ ನ್ಯೂಸ್ ವಿಜಯಪುರ
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 07 ರವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು sw.kar.nik.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಅರ್ಜಿ ನಮೂನೆ ಹಾಗೂ ಅಗತ್ಯ ದೃಡೀಕೃತ ದಾಖಲೆಗಳ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು/ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸುವಂತೆಯೂ, ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.