ವನ್ಯಜೀವಿ ಸಂರಕ್ಷಣಾ ಸಪ್ತಾಹ ಕಾರ್ಯಕ್ರಮ ಯಶಸ್ವಿ
ಬೆಳಗಾವಿ: ಜಿಲ್ಲೆಯ ಖಾನಾಪೂರ ತಾಲೂಕಿನ ಭೀಮಗಡ ಅಭಯಾರಣ್ಯದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಬೆಳಗಾವಿ ಪ್ರಾದೇಶಿಕ ವಿಭಾಗ ವತಿಯಿಂದ 70ನೆಯ ವನ್ಯಜೀವಿ ಸಂರಕ್ಷಣಾ ಸಪ್ತಾಹ ಕಾರ್ಯಕ್ರಮ ನಡೆಯಿತು. ವನ್ಯಜೀವಿ ಸಂರಕ್ಷಣೆಗಾಗಿ ತಾಲೂಕಿನ ಶಿರೋಲಿ ಕ್ರಾಸದಿಂದ ಹೆಮ್ಮಡಗಾ ಪ್ರಕೃತಿ ಶಿಬಿರದ ವರೆಗೆ ಕಾಲ್ನಡಿಗೆ ಮುಖಾಂತರ ಅರಣ್ಯ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಹಾಗೂ ಪರಿಸರ ಪ್ರೇಮಿಗಳು ಶಾಸಕರು ರಾಜಕೀಯ ಮುಖಂಡರು ಪತ್ರಕರ್ತರು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೋಳಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಟೀ ಶರ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು. ಪರಿಣಿತರಿಂದ ಹಾವುಗಳ ಕುರಿತು ಅರಿವು ಮೂಡಿಸಲಾಯಿತು.