ನಮ್ಮ ವಿಜಯಪುರ

ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು, ಅಯ್ಯಯ್ಯೋ….ಏನಿದು ದುರ್ಘಟನೆ

ವಿಜಯಪುರ: ಎರಡು ವರ್ಷದ ಕಂದನೋರ್ವ ಚರಂಡಿಗೆ ಬಿದ್ದು ಅಸುನೀಗಿರುವ ಘಟನೆ ಸಾರ್ವಜನಿಕ ರನ್ನು ಬೆಚ್ಚಿ ಬೀಳಿಸಿದೆ. ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಯಾಸೀನ್ ಸದ್ದಾಂ ಮುಲ್ಲಾ (2) ಮೃತ ಕಂದ. ತೆರೆದ ಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕಳೆದ ಹಲವು ತಿಂಗಳುಗಳಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದರೂ ಈವರೆಗೆ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಈ ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಮೃತಪಟ್ಟಿರುವ ಕುಟುಂಬಸ್ಥರು ಆರೋಪಿಸಿದರಲ್ಲದೇ ಮಗುವಿನ ಶವ ಇಟ್ಟು ಕೆಲ ಕಾಲ ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು, ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಢಾಯಿಸಿದರಾದರೂ ಹೋದ ಜೀವ ಮರಳಿ ಬಂದೀತೆ?

error: Content is protected !!