ಲಾಡ್ಜ್ ಮೇಲೆ ಪೊಲೀಸರ ದಾಳಿ, ಯುವತಿಯರ ರಕ್ಷಣೆ
ಬೆಳಗಾವಿ: ಖಾನಾಪುರ ಪಟ್ಟಣದ ಪ್ರಮುಖ ರಸ್ತೆಯಲ್ಲಿನ ಲಾಡ್ಜ್ ಮೇಲೆ ಖಾನಾಪುರ ಪಿಆಯ್ ಮಂಜುನಾಥ ನಾಯಕ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಐದು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, ಹನ್ನೊಂದು ಜನ ಯುವಕರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪಟ್ಟಣದ ಲಾಡ್ಜ್ ಮೇಲೆ ದಾಳಿ ಮಾಡಿದ ಖಾನಾಪುರ ಪೊಲೀಸರು ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಪರಾದ ಪಿಎಸ್ಆಯ್ ಚನ್ನಕೇಶವ ಬಬಲಿ, ಮುಖ್ಯ ಪೇದೆ ಜಯರಾಮ ಹಮ್ಮಣ್ಣನ್ನವರ, ಬಾಳಪ್ಪ ಯಲಿಗಾರ್ ಮತ್ತು ಪೊಲೀಸ್ ಸಿಬ್ಬಂದಿ ಬಾಗವಹಿಸಿದ್ದರು.