ವಿಜಯಪುರ

ಬೈಕ್- ಲಾರಿ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

ಸರಕಾರ ನ್ಯೂಸ್‌ ವಿಜಯಪುರ

ಬೈಕ್‌ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬೈಕ್‌ ಸವಾರರಿಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಅನಿಲ ಚವ್ಹಾಣ (35) ಹಾಗೂ  ಶಿವಾಜಿ ಚವ್ಹಾಣ (40) ಎಂಬುವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಕಲ ಲಾರಿ ಬಿಟ್ಟು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿಯೂ ಅಪಘಾತ ಸಂಭವಿಸಿದ್ದು, ಬೈಕ್‌ಗೆ ಕ್ರೇನ್‌ ಡಿಕ್ಕಿಹೊಡೆದು ಬೈಕ್‌ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಘಟನೆ

ಶಿವಪುತ್ರಪ್ಪ ಭಜಂತ್ರಿ (40) ಮೃತ ಬೈಕ್ ಸವಾರ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳ ಗ್ರಾಮದ ನಿವಾಸಿ ಎಂಬುದು ಗೊತ್ತಾಗಿದೆ. ನಾಲತವಾಡ ಪಟ್ಟಣದ ಹೋಂಡಾ ಶೋರೂಂ ಬಳಿ ಮುದ್ದೇಬಿಹಾಳ ನಾರಾಯಣಫೂರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ಕ್ರೇನ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!