ನಮ್ಮ ವಿಜಯಪುರ

ವಿಜಯಪುರ ಮಹಾನಗರ ಪಾಲಿಕೆಗೆ ಉಪ ಚುನಾವಣೆಗೆ ಅಧಿಸೂಚನೆ ! ಡಿಸಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಿವಿಧ ಕಾರಣಗಳಿಂದ ಖಾಲಿ ಇರುವ ವಾರ್ಡ ನಂ.29ರ ಸ್ಥಾನಕ್ಕೆ ಉಪ ಚುನಾವಣೆಗೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ನಾಮಪತ್ರ ಸಲ್ಲಿಸಲು ನವೆಂಬರ್ 11, 2024 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ನವೆಂಬರ್ 12,2024 ರಂದು ನಡೆಯಲಿದೆ. ನವೆಂಬರ್ 14,2024ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅವಶ್ಯವಿದ್ದಲ್ಲಿ ನವೆಂಬರ್ 23, 2024 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಸಲಾಗುತ್ತದೆ. ನವೆಂಬರ್ 26,2024 ರಂದು ಚುನಾವಣೆ ಕಾರ್ಯ ಮುಕ್ತಾಯಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!