ರಾಜ್ಯ

ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್, ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ

ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೇ, ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ ಜಾರಿ ಮಾಡಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

Leave a Reply

Your email address will not be published. Required fields are marked *

error: Content is protected !!