ಎಸ್ ಸಿ-ಎಸ್‌ಟಿ ಸಮುದಾಯಕ್ಕೆ ಗುಡ್ ನ್ಯೂಸ್, ಸಚಿವ ಸಂಪುಟದ ಮಹತ್ವದ ನಿರ್ಣಯ ಏನು ಗೊತ್ತಾ?
ಸರಕಾರ ನ್ಯೂಸ್ ಬೆಂಗಳೂರು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ರೂ.47.00 ಕೋಟಿ ಅನುದಾನ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ SCSP, TSP ಅನುದಾನದ ಅಡಿಯಲ್ಲಿ ಪ್ರಸ್ತುತ ಲಭ್ಯವಿರುವ ರೂ.47.00 ಕೋಟಿಗಳ ಕಾರ್ಪಸ್‍ಫಂಡ್‍ನ್ನು ಕಾರ್ಪಸ್ ನಿಧಿಯನ್ನು ಸ್ಥಾಪಿಸಿ 33 ವಿರಳ ಹಾಗೂ ದುಬಾರಿ ವೆಚ್ಚದ ಕಾಯಿಲೆಗಳ ಚಿಕಿತ್ಸೆಗಾಗಿ ಬಳಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಎಸ್ಸಿ – ಎಸ್.ಟಿ ಹಾಸ್ಟೆಲ್‍ಗಳಿಗೆ ಮಂಚ್-ಹಾಸಿಗೆ ಪೂರೈಕೆ:
ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶ ಅಭಿವೃದ್ಧಿಪಡಿಸುವ ಸಲುವಾಗಿ ಕಲ್ಯಾಣ ಕರ್ನಾಟಕದ ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸರ್ಕಾರಿ ವಸತಿ ಶಾಲೆಗಳು ಮತ್ತು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸಲು ಪ್ರಸ್ತಾಪಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2022-23ನೇ ಸಾಲಿನಲ್ಲಿ ಒದಗಿಸಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಲಭ್ಯವಿರುವ ರೂ. 4266.38 ಲಕ್ಷಗಳ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸುವುದಕ್ಕಾಗಿ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)