ರಾಜ್ಯ

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ, ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಸರಕಾರ ನ್ಯೂಸ್‌ ಬೆಂಗಳೂರು

ರಾಜ್ಯದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ.

ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (1ನೇ ತಿದ್ದುಪಡಿ) ನಿಯಮಗಳು 2024 (ಅನುಬಂಧ-3) ಕರಡನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗುವವರಿಂದ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಲು ಮತ್ತು ಕರಡನ್ನು ನಿಯಮಗಳಿಗೆ ಯಾವುದೇ ಆಕ್ಷೇಪಣೆ/ಸಲಹೆಗಳು ಸ್ವೀಕೃತವಾಗದಿದ್ದಲ್ಲಿ ಅಥವಾ ಸ್ವೀಕೃತವಾದ ಆಕ್ಷೇಪಣೆ / ಸಲಹೆಗಳನ್ನು ಪರಿಗಣಿಸಿ ಕರಡು ನಿಯಮಗಳಲ್ಲಿ ಯಾವುದೇ ಪ್ರಮುಖ ತಿದ್ದುಪಡಿಗಳನ್ನು ಮಾಡದಿದ್ದಲ್ಲಿ, ಸದರಿ ಕರಡು ನಿಯಮಗಳನ್ನು ಪುನ: ಸಚಿವ ಸಂಪುಟದ ಮುಂದೆ ಮಂಡಿಸದೇ ಅಂತಿಮಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ಎಸ್‌ ಸಿ-ಎಸ್‌ಟಿ ಸಮುದಾಯಕ್ಕೆ ಗುಡ್‌ ನ್ಯೂಸ್‌, ಸಚಿವ ಸಂಪುಟದ ಮಹತ್ವದ ನಿರ್ಣಯ ಏನು ಗೊತ್ತಾ?

ರಾಜ್ಯದಲ್ಲಿನ ಒಟ್ಟು ಅಲ್ಪಸಂಖ್ಯಾತರ ಜನಸಂಖ್ಯೆಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ದ ಮತ್ತು ಪಾರ್ಸಿ ಸಮುದಾಯಗಳ ಜನಸಂಖ್ಯೆ ಪ್ರಮಾಣವು ತುಂಬಾ ಕಡಿಮೆಯಿರುವುದರಿಂದ ಅಲ್ಪಸಂಖ್ಯಾತರ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಲಿ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳಲ್ಲಿ ನಿಗಧಿಪಡಿಸಿರುವ ಶೇಕಡಾವಾರು ವಿದ್ಯಾರ್ಥಿಗಳು ಲಭ್ಯವಾಗುವುದು ಕಷ್ಟಕರವಾಗಿರುವುದರಿಂದ   ಈ ನಿಯಮಗಳಿಗೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿತ್ತು.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ ನೀಡಲು ಸಮ್ಮತಿಸಲಾಗಿದೆ.

(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!