ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ಗರಿ, ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದ ಡಿಸಿ ಟಿ.ಭೂಬಾಲನ್
ವಿಜಯಪುರ: 2023ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನಕ್ಕೆ ಭಾಜನವಾಗಿತ್ತು.
ಈ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದದ ಉಮಾಶಂಕರ ಎಸ್.ಆರ್, ವಿಜಯಪುರದ ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯ ಉಪ ನಿರ್ದೇಶಕರಾದ ವಿನುತಾ ಜಿ.ಆರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.