ವಿಜಯಪುರ

ವೀರಶೈವ ಲಿಂಗಾಯತ ಸಮುದಾಯಕ್ಕೆ ಖುಷಿ ಸುದ್ದಿ, ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಜಯಪುರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ 2021-22ನೇ ಸಾಲಿನ “ಜೀವಜಲ” ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಪ್ರವರ್ಗ-3ಬಿ ಯ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜೀವಜಲ ಯೋಜನೆ ಸೌಲಭ್ಯವನ್ನು ಪಡೆಯಲು ಇಚ್ಛಿಸಲಿರುವ ವೀರಶೈವ ಲಿಂಗಾಯತ ಸಮುದಾಯದ ಫಲಾಪೇಕ್ಷಿಗಳು ನಿಗಮದ https://dbcdc.karnataka.gov.in ಈ ವೆಬ್‍ಸೈಟ್ ಸಂಪರ್ಕಿಸಬಹುದಾಗಿರುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರಾದ ಕೆ.ಎ ಕಾಂಬಳೆ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://dbcdc.karnataka.gov.in ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ:080-22865522 ಅಥವಾ ಜಿಲ್ಲಾ ವ್ಯವಸಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ) ವಿಜಯಪುರ ಕಛೇರಿ ದೂರವಾಣಿ ಸಂಖ್ಯೆ:08352-258128 ಗೆ ಸಂಪರ್ಕಿಸಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:25-04-2022 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ) ಎಸ್.ಎ. ಜಾಗೀರದಾರ ರವರ ಮನೆ ತಾಜ್ ಮಂಜಿಲ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಎದುರಿಗೆ ಬಾಗಲಕೋಟ ರೋಡ ವಿಜಯಪುರ-586101 ಇಲ್ಲಿಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!