ಆಟೋ ಮೇಲೆ ಉರುಳಿ ಬಿದ್ದ ಮರ, ಮಹಿಳೆ ಸ್ಥಳದಲ್ಲೇ ಸಾವು, ಚಾಲಕನ ಸ್ಥಿತಿ ಗಂಭೀರ
ವಿಜಯಪುರ: ನಾಮಕರಣಕ್ಕೆ ಹೊರಟಿದ್ದ ಆಟೋದ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ಮಹಿಳೆ ಸ್ಥಳದಲ್ಲದೇ ಸಾವಿಗೀಡಾಗಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲಾ ಪೊಲೀಸ್ ಪರೇಡ್ ಮೈದಾನದ ಬಳಿ ಮಂಗಳವಾರ ನಡೆದಿದೆ.
ಸ್ಥಳಿಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಎಂಬುವರು ಮೃತರಾಗಿದ್ದಾರೆ. ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಆಟೋ ಚಾಲಕ ಸಚಿನ ರಾಠೋಡ್‌ಗೆ ಗಾಯಗಳಾಗಿವೆ.
ಮದಬಾವಿ ತಾಂಡಾದ ಆಟೋ ಚಾಲಕನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಿಂದ ಕೆಲ ಕಾಲ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.