ತಿಕೋಟಾ ವ್ಯಾಪ್ತಿಯಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು…..!
ವಿಜಯಪುರ: ಬಿಸಿಲೂರು ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಅಕಾಲಿಕ ಮಳೆ ಸಾಕಷ್ಟು ಅವಾಂತರ ಸೃಷ್ಟಿ ಸುತ್ತಿದೆ.
ಕಳೆದೆರಡು ದಿನಗಳಿಮದ ಸುರಿಯುತ್ತಿರುವ ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ದ್ರಾಕ್ಷಿ, ದಾಳಿಂಬೆ, ಮಾವು, ಲಿಂಬೆ ಹೀಗೆ ಹಲವು ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ಇದೀಗ ಗಾಯದ ಮೇಲೆ ಬರೆ ಎಂಬಂತೆ ಸಿಡಿಲು ಬಡಿದು ಓರ್ವ ಅಸುನೀಗಿದ್ದಾನೆ.
ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಶನಿವಾರ ಅಕಾಲಿಕ ಮಳೆ ಸುರಿದಿದ್ದು ಕಾಶಿನಾಥ್ ಸೂಲಂಕಾರ್ ಸಿಡಲಿಗೆ ಬಲಿಯಾಗಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಸಿಡಿಲು ಬಡಿದಿದೆ.
ತಿಕೋಟಾ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.