ವಿಜಯಪುರ

ಅಕ್ಕಮಹಾದೇವಿ ವಿವಿಯಲ್ಲಿ ವಿನೂತನ ಕಾರ್ಯಕ್ರಮ, ಶಿಕ್ಷಕರ ಪರೀಕ್ಷೆ ಉಚಿತ ತರಬೇತಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿ ವತಿಯಿಂದ 2022ರ ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಏ.25ರಿಂದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ 10 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಹಿಳಾ ವಿವಿಯ ಶಿಕ್ಷಣ ನಿಕಾಯದ ಡೀನ್ ಪ್ರೊ.ಡಿ.ಎಂ. ಜ್ಯೋತಿ ಉದ್ಘಾಟಿಸಲಿದ್ದು, ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅಧ್ಯಕ್ಷತೆ ವಹಿಸುವರು.
ಕುಲಸಚಿವ ಎಂ.ಎನ್.ಚೋರಗಸ್ತಿ, ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್.ಕೆ, ಆರ್ಥಿಕ ಅಧಿಕಾರಿ ಪ್ರೊ.ಎಸ್.ಬಿ.ಕಾಮಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿಯ ಸಂಯೋಜಕ ಡಾ.ಪ್ರಕಾಶ ಸಣ್ಣಕ್ಕನವರ ಹಾಗೂ ಐಸಿಟಿ ಕೋಶದ ಸಂಯೋಜಕ ಸಂದೀಪ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!