ವಿಜಯಪುರ

ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಅಧಿಕಾರ ಸ್ವೀಕಾರ, ಮೊದಲ ದಿನ ಹೇಳಿದ್ದೇನು ಗೊತ್ತಾ?

ವಿಜಯಪುರ: ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಬಗ್ಗೆ ಸಾಕಷ್ಟು ಗೊತ್ತಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶವಿದೆ‌. ಈ ಭಾಗದ ಸ್ಮಾರಕಗಳ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು. ಎಲ್ಲಕ್ಕಿಂತ ಹೆಚ್ಚಾಗಿ ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಅತ್ಯಂತ ಕಡಿಮೆ ಸಿಬ್ಬಂದಿಯ‌ನ್ನು ಬಳಸಿಕೊಂಡು ಸಹ ಹೆಚ್ಚಿನ ಕೆಲಸ ಮಾಡುವ ಸವಾಲು ನಮ್ಮ ಮುಂದಿದೆ‌. ಹೊರಗುತ್ತಿಗೆ ಆಧಾರದ ಮೇಲೆ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಂಡು ಗರಿಷ್ಠ ಸೇವೆ ನೀಡಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಅಲ್ಲದೇ ಕುಡಿಯುವ ನೀರಿನ ಸಮಸ್ಯೆಯಾಗಲಿ, ಆರೋಗ್ಯ ಸಮಸ್ಯೆಯಾಗಲಿ ಕೂಡಲೇ ಸ್ಪಂದಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ವಾರ್ತಾಧಿಕಾರಿ ಗವಿಸಿದ್ದ ಹೊಸಮನಿ, ಎಸಿ ಬಲರಾಮ ಲಮಾಣಿ ಮತ್ತಿತರರಿದ್ದರು. ಜಿಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ ಅವರು ಹೂ ಗುಚ್ಚ ನೀಡಿ ಸ್ವಾಗತಿಸಿದರು.

error: Content is protected !!